ಮೋದಿ ಮತ್ತೆ ಪ್ರಧಾನಿಯಾಗಲು ಬಂಟ್ವಾಳದಲ್ಲಿ ಮಹಾರುದ್ರಯಾಗ

ಬಂಟ್ವಾಳ ಡಿಸೆಂಬರ್ 5: ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗ ಬರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಹಾರುದ್ರ ಯಾಗ ನಡೆಸಲಾಗಿದೆ.

ಬಂಟ್ವಾಳ ತಾಲೂಕಿನ ಕಕ್ಕೆಪದವು ಎಂಬಲ್ಲಿ ಯಾಗ ನಡೆದಿದ್ದು ಸ್ಥಳೀಯ ಸಂಘಟನೆ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಆಯೋಜನೆ ಮಾಡಲಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯಾಗದ ಪೂರ್ಣಾಹುತಿ ಕಾರ್ಯ ನಿಗದಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ಬಿಎಸ್ವೈ ಗೈರಾಗಿದ್ದರಿಂದ ಸಂಸದ ನಳಿನ್ ಕುಮಾರ್ ಯಾಗದ ಪೂರ್ಣಾಹುತಿ ನೆರವೇರಿಸಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Facebook Comments

comments