LATEST NEWS
ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ

ಕೋಲ್ಕತ್ತಾ ಫೆಬ್ರವರಿ 18: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.
ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ‘ಮೇಳ’ದಲ್ಲಿ ಕಾಲ್ತುಳಿತದ ಪರಿಸ್ಥಿತಿ ಸಾಮಾನ್ಯವಾಗಿದೆ. ಆದರೆ, ನೀವು ಏನು ಮಾಡಿದ್ದೀರಿ ಎಂಬುದು ಮುಖ್ಯ’ ಎಂದು ದೂರಿದರು.
