KARNATAKA
ಭಾರೀ ಮಳೆಗೆ ಕುಸಿದು ಬಿದ್ದ ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ….!!
ಮೈಸೂರಿನ ಅಕ್ಟೋಬರ್ 21: ಮೈಸೂರಿನ ಪಾರಂಪರಿಕ ಕಟ್ಟಡವಾಗಿರುವ ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡದ ಒಂದು ಬಾಗವು ಕುಸಿದು ಬಿದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ. ಮಹಾರಾಣಿ ಪದವಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಕುಸಿದ ಭಾಗವು ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿಯಾಗಿದೆ ಎಂದು ವರದಿಗಳು ತಿಳಿಸಿವೆ.
ವಿದ್ಯಾರ್ಥಿಗಳು 10.30ರ ವೇಳೆಗೆ ಬರುವರಿದ್ದರು. ಈ ವೇಳೆ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ 10.15ರ ವೇಳೆ ಪ್ರಾಂಶುಪಾಲರ ಗಮನಕ್ಕೆ ತಂದಿದ್ದಾರೆ. ಕೂಡಲೇ ಕೊಠಡಿಗೆ ಬಂದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದಲ್ಲದೆ, ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚನೆ ನೀಡಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರೆ.