LATEST NEWS
ಮಹಾರಾಷ್ಟ್ರ – ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿ – 8 ಮಂದಿ ಬಲಿ
ನಾಸಿಕ್ ಜನವರಿ 13: ಕಬ್ಬಿಣದ ರಾಡ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಈ ಘಟನೆ ನಡೆದಿದೆ.
ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣಗ ರಾಡ್ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ಆರಂಭಿಸಿದರು, ಗಾಯಾಳುಗಳು ಜಿಲ್ಲಾಸ್ಪತ್ರೆ ಮತ್ತು ಕೆಲವರನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.