Connect with us

LATEST NEWS

ನಾಗ್ಪುರ – ಸೋಲಾರ್ ಇಂಡಸ್ಟ್ರೀಸ್‌ನಲ್ಲಿ ಸ್ಫೋಟ- 9 ಮಂದಿ ಸಾವು

ನಾಗಪುರ ಡಿಸೆಂಬರ್ 17 : ಕಲ್ಲಿದ್ದಲು ಸ್ಪೋಟಕಕ್ಕೆ ಬಳಸುವ ಸ್ಪೋಟಕಗಳನ್ನು ಪ್ಯಾಕ್ ಮಾಡುವ ವೇಳೆ ಉಂಟಾದ ಸ್ಪೋಟಕಕ್ಕೆ 9 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಎಂಬ ಕಂಪೆನಿಯಲ್ಲಿ ನಡೆದಿದೆ.


ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದಲ್ಲದೆ, ಸ್ಫೋಟದಲ್ಲಿ ಇನ್ನೂ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಲ್ಲಿದ್ದಲು ಸ್ಫೋಟಗೊಳಿಸಲು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿದೆ.

ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯೊಂದಿಗೆ ವ್ಯವಹರಿಸುತ್ತಿರುವುದಾಗಿ ತಿಳಿದುಬಂದಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಂಪನಿ ಆವರಣದ ಸುತ್ತಲೂ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಅಂಬುಲೆನ್ಸ್‌ಗಳೂ ಸ್ಥಳಕ್ಕಾಗಿಮಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *