Connect with us

LATEST NEWS

ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಉಡುಪಿ, ಮಾರ್ಚ್ 8 : ಉಡುಪಿಜಿಲ್ಲೆಗೆ ನೆರೆಯ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ 72 ಗಂಟೆಗಳ ಅವಧಿಯ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದ್ದು, ವ್ಯವಹಾರಿಕ ಉದ್ದೇಶಗಳಿಗಾಗಿ ಎರಡೂ ರಾಜ್ಯಗಳಿಗೆ ನಿರಂತರವಾಗಿ ಓಡಾಡುವವರು 15 ದಿನಗಳಿಗೊಮ್ಮ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು, ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.


ಸಾರ್ವಜನಿಕರು ತಮ್ಮ ಮನೆಯ ಸಮೀಪ ನೆಗೆಟಿವ್ ವರದಿ ಇಲ್ಲದೇ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆ ಮಾಹಿತಿ ದೊರೆತಲ್ಲಿ ಕೂಡಲೇ ತಿಳಿಸುವಂತೆ ಡಿಸಿ ಜಿ.ಜಗದೀಶ್ ಹೇಳಿದರು.

ಜಿಲ್ಲೆಯಲ್ಲಿ ಇಂದಿನಿಂದ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಖಾಸಗಿ ಮತ್ತು ನೊಂದಾಯಿತ 14 ಖಾಸಗಿ ಆಸ್ಪತ್ರೆಗಳಲ್ಲಿ ನಿಗಧಿತ ದರ ಪಾವತಿಸಿ, 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ರಿಂದ 59 ವಯಸ್ಸಿನವರಲ್ಲಿ ಇರುವವರಿಗೆ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸರ್ಕಾರಿ ಆಸ್ಪತ್ರತೆಗಳಲ್ಲಿ ಸಂಪೂರ್ಣ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 250 ರೂ ಪ್ರತೀ ಡೋಸ್ ಗೆ ನೀಡಿ ಪಡೆಯಬಹುದಾಗಿದೆ, ಫಲಾನುಭವಿಗಳು ಲಸಿಕೆ ಪಡೆಯಲು ಯಾವುದೇ ಆಸ್ಪತ್ರೆಗಳಲ್ಲಿ ಆನ್ ಲೈನ್ ಮೂಲಕ ಯಾವುದೆ ದಿನಾಂಕವನ್ನು ಆಯ್ಕೆಮಾಡಿಕೊಳ್ಳಬಹುದು ಲಸಿಕೆ ಪಡೆಯಲು https://selfregistration.cowin.gov.in/ ವೆಬ್ ಸೈಟ್ ಮೂಲಕ ನೊಂದಾಯಿಸಿಕೊಳ್ಳಬಹುದು.

ಗ್ರಾಮೀಣ ಪ್ರದೇಶದಲ್ಲಿ ನೆಟ್ ವರ್ಕ್ ಕವರೇಜ್ ಮತ್ತು ತಿಳುವಳಿಕೆ ಇಲ್ಲದವರು ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ನೇರವಾಗಿ ಲಸಿಕಾ ಕೆಂದ್ರಕ್ಕೆ ಬಂದು ಸ್ಪಾಟ್ ರಿಜಿಸ್ಟ್ರೇಷನ್ ಮಾಡಿ ಅದೇ ದಿನ ಲಸಿಕೆ ಪಡೆಯಬಹುದು, ಜಿಲ್ಲೆಯಲ್ಲಿ 60 ವರ್ಷ 60 ವರ್ಷ ಮೇಲ್ಪಟ್ಟ ಮತ್ತು 45 ರಿಂದ 59 ವಯಸ್ಸಿನ 151557 ಮಂದಿಗೆ ಲಸಿಕೆ ಗುರಿ ನಿಗಧಿಪಡಿಸಿದ್ದು, ಜಿಲ್ಲೆಗೆ 82100 ಡೋಸ್ ಕೋವಿಶೀಲ್ಡ್ ಲಸಿಕೆ ಸರಬರಜು ಆಗಿದ್ದು, ಇದರಲ್ಲಿ 49200 ಹಿರಿಯ ನಾಗರೀಕರಿಗೆ ಮೀಸಲಾಗಿದೆ ಎಂದು ಜಿಲ್ಲಾಧಿಕರಿ ಜಿ.ಜಗದೀಶ್ ತಿಳಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *