LATEST NEWS
ಕರಾವಳಿಯಾದ್ಯಂತ ಸಂಭ್ರಮದ ಮಹಾಶಿವರಾತ್ರಿ

ಮಂಗಳೂರು ಮಾರ್ಚ್ 08: ಕರಾವಳಿಯಾದ್ಯಂತ ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಲಾಗುತ್ತಿದೆ. ಜಿಲ್ಲೆಯ ವಿವಿಧ ಶಿವ ದೇವಸ್ಥಾನಗಳಲ್ಲಿ ಇಂದು ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಆರಂಭಗೊಂಡಿತ್ತು.
ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ, ಕುಡುಪು ಶ್ರೀ ಅನಂತ ಪದ್ಮನಾಭ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಳಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದೆ.