Connect with us

MANGALORE

ಬಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ನಿಧನ

ಬಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ನಿಧನ

ಬೆಂಗಳೂರು ಎಪ್ರಿಲ್ 25: ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.

ಮಹೇಂದ್ರ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿಯೇ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರು ವಾಸಿಯಾಗಿದ್ದರು.

“ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿದ್ದ ಅವರು ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು. ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Facebook Comments

comments