LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಘಟಾನುಘಟಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಘಟಾನುಘಟಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಮಂಗಳೂರು ಏಪ್ರಿಲ್ 23 : ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಕ್ಕೆ ಬಹುತೇಕ ಪ್ರಮುಖ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡ ಅಧಿಕೃತವಾಗಿ ಸಿದ್ದಗೊಂಡಿದೆ.
ಬಹುತೇಕ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆಗೂ ಮುನ್ನ ದೇವಾಲಯ, ಚರ್ಚ್, ಮಸೀದಿ ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೊ , ಬಿಜೆಪಿ ಅಭ್ಯರ್ಥಿ ವೇದವಾವ್ಯಸ ಕಾಮತ್ , ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವಾ ದೇವಾಲಯ , ಮಸೀದಿ ಸೇರಿದಂತೆ ಚರ್ಚ್ ಗಳಿಗೆ ತೆರಳಿ ವಿಶೇಷ ಪೂಜೆ , ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರು ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಮಂಗಳೂರಿನ ತಾಲೂಕು ಕಚೇರಿದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅದರಂತೆ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯಿದ್ದೀನ್ ಬಾವಾ, ಪುತ್ತೂರು ಕ್ಷೇತ್ರ ದಿಂದ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ , ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಇಂದು ನಾಮಪತ್ರ ಸಲ್ಲಿಸಿಲಿದ್ದಾರೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಅಪಾರ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಅಗಮಿಸಿದ ಹರೀಶ್ ಪೂಂಜಾ ಚುನಾವಣಾ ಅಧಿಕಾರಿಯವರಿಗೆ ನಾಮಪತ್ರ ಸಲ್ಲಿಸಿದರು. ಮಂಗಳೂರು ಉತ್ತರ ಕ್ಷೆತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ರೈ ಬೋಳಿಯಾರ್ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೆತ್ರದ ಬಿಜೆಪಿ ಅಭ್ಯರ್ಥಿ ವೇದವಾಸ್ ಕಾಮತ್ , ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ಸಿಪಿಐಎಂ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.