LATEST NEWS
ಲಕ್ನೋ: ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅನಾಹುತ, 10 ನವಜಾತ ಶಿಶುಗಳು ಜೀವಂತ ದಹನ, 16 ಗಂಭೀರ..!!
ನವಜಾತ ಶಿಶು ತೀವ್ರ ನಿಗಾ ವಿಭಾಗದಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಜೀವಂತ ದಹನವಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶ ದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಲಕ್ನೋ: ನವಜಾತ ಶಿಶು ತೀವ್ರ ನಿಗಾ ವಿಭಾಗದಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಜೀವಂತ ದಹನವಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶ ದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ನವಜಾತ ಶಿಶುಗಳ ತೀವ್ರ ನಿಗಾ ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ವಾರ್ಡ್‌ನಲ್ಲಿ ದುರಂತ ಸಂಭವಿಸಿದ ವೇಳೆ 54 ಶಿಶುಗಳಿದ್ದವು. 16 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, 28 ಮಂದಿ ಸುರಕ್ಷಿತವಾಗಿದ್ದಾರೆ ಎಂದು ಝಾನ್ಸಿ ವಲಯ ಡಿಐಜಿ ಕಲಾನಿಧಿ ನೈಥಾನಿ ಹೇಳಿದ್ದಾರೆ.
ರಾತ್ರಿ 10.30 ರಿಂದ 10.45ರ ಅವಧಿಯಲ್ಲಿ ಬೆಂಕಿ ಇಡೀ ಆವರಣವನ್ನು ವ್ಯಾಪಿಸಿದ್ದು, ಕಾಲ್ತುಳಿತದಂಥ ಪರಿಸ್ಥಿತಿ ಆಸ್ಪತ್ರೆಯಲ್ಲಿ ನಿರ್ಮಾಣವಾಯಿತು. ಆರು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಆರಿಸಲು ಧಾವಿಸಿದವು. ಮಧ್ಯರಾತ್ರಿ 12.30ರ ವೇಳೆಗೆ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸುರಕ್ಷಾ ಅಲರಾಂಗಳು ಕಾರ್ಯನಿರ್ವಹಿಸದೇ ಇದ್ದ ಕಾರಣ ಜನರನ್ನು ಸುರಕ್ಷಿತವಾಗಿ ಹೊರತರುವ ಕಾರ್ಯ ವಿಳಂಬವಾಯಿತು ಎಂದು ಮೂಲಗಳು ಹೇಳಿವೆ. ಆಮ್ಲಜನಕ ಸಾಂದ್ರೀಕರಣ ಘಟಕದಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿತು ಎಂದು ಮುಖ್ಯ ವೈದ್ಯಕೀಯ ಅಧೀಕ್ಷಕರು ಹೇಳಿದ್ದಾರೆ. ಘಟನೆ ಬಗ್ಗೆ 12 ಗಂಟೆಗಳ ಒಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.