LATEST NEWS
ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 14 ಮಂದಿ ಮೃತ್ಯು..!
ದಿಸ್ಪುರ: 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 14 ಜನರು ಮೃತಪಟ್ಟಿದ್ದು ಮತ್ತು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್‌ನಲ್ಲಿ ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ.
ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ 45 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರವಾಸಿ ಬಸ್ ದೇರ್ಗಾಂವ್‌ನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮುಂಜಾನೆ ಮೂರೂ ಗಂಟೆಗೆ ಪ್ರವಾಸಿಗರನ್ನು ಹೊತ್ತು ಬಸ್ ಹೊರಟಿತ್ತು ಈ ವೇಳೆ ಮಾರ್ಗರಿಟಾದಿಂದ ಕಲ್ಲಿದ್ದಲು ಹೇರಿಕೊಂಡು ಬರುತ್ತಿದ್ದ ಟ್ರಕ್ ಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ ಘಟನೆ ಸಂಭವಿಸಿದ ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿ ಜೋರ್ಹತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
14 ಪ್ರಯಾಣಿಕರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Continue Reading