LATEST NEWS
ಹಿಜಬ್ ಧರಿಸಿದ ವಿಧ್ಯಾರ್ಥಿನಿಯರನ್ನು ಕ್ಲಾಸ್ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕವಾಗಿದೆ – ಮಲಾಲ ಯೂಸುಫ್

ನವದೆಹಲಿ : ರಾಜ್ಯದಲ್ಲಿ ನಡೆಯುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್ ಝೈ ಪ್ರತಿಕ್ರಿಯಿಸಿದ್ದು.
ಹಿಜಬ್, ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ. ಕ್ಲಾಸ್ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕವಾಗಿದೆ. ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ, ನೊಬೆಲ್ ಪ್ರಶಸ್ತಿ ಪುರಸ್ಕೃತೆ ಪಾಕಿಸ್ತಾನದ ಮಲಾಲಾ ಯೂಸುಫ್ ಝಾಯಿ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿಯಾಗಿದೆ. ಮಹಿಳೆಯರಿಗೆ ನಿರ್ಬಂಧಗಳು ಮುಂದುವರಿಯುತ್ತಿವೆ. ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವ ವಿಚಾರವಾಗಿ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಎಂದು ಮಲಾಲ ಟ್ವಿಟ್ ಮಾಡಿದ್ದಾರೆ.