LATEST NEWS
ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್
ಲಂಡನ್ : ನೊಬೆಲ್ ಪುರಸ್ಕೃತ ಮಲಾಲಾ ಯೂಸುಫ್‌ಜಾಯ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಂಡನ್ ನಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಅಸರ್ ಎಂಬುವವರನ್ನು ಮದುವೆಯಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ.
ತಮ್ಮ 17ನೇ ವಯಸ್ಸಿನಲ್ಲಿ ನೋಬೆಲ್ ಪ್ರಶಸ್ತಿಯನ್ನು ಬಾಚಿಕೊಂಡ ಮಲಾಲ ಯೂಸುಫ್ ಝಾಯಿ ಅವರು 24ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಸಿಹಿ ಸುದ್ದಿಯನ್ನು ಮಲಾಲ ಅವರು ತಮ್ಮ ಟ್ವಿಟ್ಟರ್ ಖಾತೆ ಮೂಲಕ ಹಂಚಿಕೊಂಡಿದ್ದಾರೆ. ಮದುವೆಯಾದ ಕೆಲವೊಂದು ಫೋಟೋಗಳನ್ನು ಶೇರ್ ಮಾಡಿಕೊಂಡಿರುವ ಅವರು, ಇಂದು ನನ್ನ ಜೀವನದಲ್ಲಿ ಅತ್ಯಂತ ಅಮೂಲ್ಯವಾದ ದಿನ. ಅಸ್ಸರ್ ಮತ್ತು ನಾನು ವೈವಾಹಿಕ ಜೀವನಕ್ಕೆ ಕಾಲಿಟ್ಟೆದ್ದೇವೆ.
ನಾವು ನಮ್ಮ ಕುಟುಂಬಗಳೊಂದಿಗೆ ಬರ್ಮಿಂಗ್ ಹ್ಯಾಮ್‍ನಲ್ಲಿರುವ ಮನೆಯಲ್ಲಿ ಸಣ್ಣಮಟ್ಟಕ್ಕೆ ನಿಖಾ ಸಮಾರಂಭವನ್ನು ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು ಬಯಸಿದ್ದೇವೆ ಎಂದು ಬರೆದುಕೊಂಡಿದ್ದಾರೆ
ಮಲಾಲಾ ವಿವಾಹವಾಗಿರುವುದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜನರಲ್ ಮ್ಯಾನೇಜರ್ ‘ಅಸರ್ ಮಲಿಕ್’ ಅವರನ್ನು ಎಂದು ಕೆಲವು ಅಂತರ್ಜಾಲ ತಾಣಗಳು ವರದಿ ಮಾಡಿವೆ. ಆದರೆ ಈ ವಿಚಾರ ಇನ್ನೂ ದೃಢಪಟ್ಟಿಲ್ಲ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.