Connect with us

    LATEST NEWS

    ಮಳಲಿ ಮಸೀದಿ ನವೀಕರಣಕ್ಕೆ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ

    ಮಂಗಳೂರು ಎಪ್ರಿಲ್ 23: ದೇವಾಲಯದ ರೀತಿಯ ಕಟ್ಟಡ ಕಂಡು ಬಂದ ಮಳಲಿ ಮಸೀದಿಯಲ್ಲಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

    ಗಂಜಿಮಠ ನಿವಾಸಿ ಧನಂಜಯ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕೋರ್ಟ್, ಕಾಮಗಾರಿ ನಡೆಸದಂತೆ ಮತ್ತು ದೇವಸ್ಥಾನವನ್ನು ಹೋಲುವ ಕಟ್ಟಡದ ಭಾಗಕ್ಕೆ ಹಾನಿ ಉಂಟುಮಾಡುವುದಕ್ಕೆ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆಯವರೆಗೆ ಕಟ್ಟಡದ ಒಳಗೆ ಮಸೀದಿ ಕಮಿಟಿಯವರಿಗೆ, ಅನುಯಾಯಿಗಳಿಗೆ ಪ್ರವೇಶ ನಿಷೇಧಿಸಿದೆ.

    ಇನ್ನು ಮಳಲಿ ಮಸೀದಿಯ ನವೀಕರಣದ ವೇಳೆ ಉಂಟಾಗಿರುವ ಗೊಂದಲ ಪರಿಹಾರ ಆಗುವವರೆಗೆ ಮುಂಜಾಗ್ರತೆಯಾಗಿ ಬಂದೋಬಸ್ತ್ ಮಾಡಲಾಗಿದೆ ಎಂದು ನಗರ ಪೊಲಿಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಹಳೆಯ ಕಟ್ಟಡ ಕೆಡವಿದಾಗ ಮರದ ರಚನೆ ಕಂಡುಬಂದಿದೆ. ನೋಡಲು ದೇವಸ್ಥಾನದಂತಿದೆ ಎಂದು ಕೆಲವರು ಮಸೀದಿ ಮುಖ್ಯಸ್ಥರ ಜತೆ ಚರ್ಚಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ದಾಖಲೆ ಪರಿಶೀಲಿಸಿ ಸೌಹಾರ್ದವಾಗಿ ಪ್ರಕರಣ ಬಗೆಹರಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿ ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply