FILM
ನಟಿ ಮಾಲಾಶ್ರೀ ಪತಿ ನಿರ್ಮಾಪಕ ರಾಮು ಕೊರೊನಾಗೆ ಬಲಿ
ಬೆಂಗಳೂರು ಎಪ್ರಿಲ್ 26: ಕನ್ನಡದ ಅತ್ಯಂತ ಯಶಸ್ವಿ ನಿರ್ಮಾಪಕರಲ್ಲಿ ಒಬ್ಬರಾಗಿದ್ದು ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ನಟಿ ಮಾಲಾಶ್ರೀ ಅವರ ಗಂಡ ರಾಮು ಕೊರೋನಾಗೆ ಬಲಿಯಾಗಿದ್ದಾರೆ.
ಉಸಿರಾಟದ ತೊಂದರೆಯಿಂದಾಗಿ 3 ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಎಕೆ 47, ಲಾಕಪ್ ಡೆತ್, ಕಲಾಸಿಪಾಳ್ಯ, ಸಿಬಿಐ ದುರ್ಗಾ ಸಿನಿಮಾವನ್ನು ನಿರ್ಮಿಸಿದ್ದರು. ಸ್ಯಾಂಡಲ್‍ವುಡ್‍ನಲ್ಲಿ ಕೋಟಿ ರಾಮು ಎಂದೇ ಹೆಸರು ಪಡೆದಿದ್ದರು.
52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.