DAKSHINA KANNADA
ಲವ್ ಜಿಹಾದ್ ಮೂಲಕ ಧರ್ಮ ತೊರೆಯುವ ಯುವತಿಯರಿಗೆ ನಟಿ ಮಾಳವಿಕಾ ಕಿವಿ ಮಾತು..!!
ಪುತ್ತೂರು ಡಿಸೆಂಬರ್ 04: ಲವ್ ಜಿಹಾದ್ ಮೂಲಕ ತನ್ನ ಧರ್ಮವನ್ನು ತೊರೆದು ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಯುವತಿಯರು ಮೊದಲು ತಾವು ಏನನ್ನು ಕಳೆದುಕೊಳ್ಳುತ್ತೆ ಎಂಬ ಬಗ್ಗೆ ಯೋಚಿಸಬೇಕು ಎಂದು ನಟಿ ರಾಜಕಾರಣಿ ಮಾಳವಿಕಾ ಅವಿನಾಶ್ ಯುವತಿಯರಿಗೆ ಕಿವಿ ಮಾತು ಹೇಳಿದ್ದಾರೆ.
ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಹಮ್ಮಿಕೊಂಡಿದ್ದ ಮಹಿಳಾ ಸಮ್ಮೇಳನ ನಾರಿ ಶಕ್ತಿ ಸಂಗಮದಲ್ಲಿ ಅವರು ‘ಭಾರತೀಯ ಚಿಂತನೆಯಲ್ಲಿ ಮಹಿಳೆ’ ಕುರಿತು ಮಾತನಾಡಿದ ಅವರು ಹಿಂದೂ ಧರ್ಮದಲ್ಲಿ ಏಕ ಪತ್ನಿ ಸಂಸ್ಕಾರವಿದ್ದು, ಮಹಿಳೆಯರು ಪತಿಯೊಂದಿಗೆ ಸಮಾನ ಹಕ್ಕುಗಳಿವೆ. ಆದರೆ ಮುಸ್ಲಿಂ ಧರ್ಮದಲ್ಲಿ ಬಹು ಪತ್ನಿತ್ವದ ಪದ್ಧತಿಯಿದೆ. ಅನ್ಯ ಧರ್ಮೀಯರನ್ನು ವಿವಾಹವಾಗುವ ಹಿಂದೂ ಯುವತಿ ತನ್ನ ಸಮಾನ ಹಕ್ಕುಗಳಿಂದ ವಂಚಿತಳಾಗುತ್ತಾಳೆ. ಅಲ್ಲದೆ, ಬಹುಪತ್ನಿತ್ವದ ಅಡಿ ಒಬ್ಬಳಾಗಿ ಬದುಕುವ ಅನಿವಾರ್ಯತೆ ಬರುತ್ತದೆ ಎಂದು ಅವರು ವಿಶ್ಲೇಷಿಸಿದರು.
ಭಾರತೀಯ ಚಿಂತನೆಯಲ್ಲಿ ವೇದ ಕಾಲದಿಂದಲೂ ಪುರುಷ– ಮಹಿಳೆ ಎಂಬ ಬೇದ ಇರಲಿಲ್ಲ. ಹಿಂದೂ ಧರ್ಮವನ್ನು ಅನ್ಯರು ಸುಧಾರಣೆ ಮಾಡಲು ಹೋಗಲಿಲ್ಲ. ಬದಲಾಗಿ ಧರ್ಮದೊಳಗಿನ ಮಂದಿ ಸಮಾಜದ ಸುಧಾರಣೆ ಮಾಡಿದ್ದಾರೆ. ಧರ್ಮದ ಸಂಸ್ಕೃತಿ, ಸಂಸ್ಕಾರವನ್ನು ನಾಶಪಪಡಿಸಿ ಸಮಾನತೆಯನ್ನು ಸಾಧಿಸುವ ಉದ್ದೇಶ ಹಿಂದೂ ಧರ್ಮಕ್ಕೆ ಇಲ್ಲ’ ಎಂದು ಅವರು ಹೇಳಿದರು.
https://youtu.be/6I67EQkerSg