Connect with us

    FILM

    ಮಲೆಯಾಳಂನ ಹಿರಿಯ ನಟ ಸಿಪಿಐಎಂ ಶಾಸಕ ಮುಕೇಶ್ ಮೇಲೆ ರೇಪ್ ಕೇಸ್

    ಕೊಚ್ಚಿ ಅಗಸ್ಟ್ 29: ಮಲೆಯಾಳಂ ಸಿನೆಮಾರಂಗದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕುರಿತಂತೆ ಹೇಮಾ ಕಮಿಟಿ ವರದಿ ಬಳಿಕ ಇದೀಗ ಮಲೆಯಾಳಂ ಸಿನೆಮಾ ರಂಗದಲ್ಲಿ ಅಲ್ಲೊಲ ಕಲ್ಲೊಲ ಆಗಿದ್ದು, ಇದೀಗ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    ನಟ ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ನಟಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬುಧವಾರ ರಾತ್ರಿ ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ನಟಿಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ನ್ಯಾಯಮೂರ್ತಿ ಕೆ.ಹೇಮಾ ಸಮಿತಿಯ ವರದಿ ಬಹಿರಂಗವಾದ ಬೆನ್ನಲ್ಲೇ ಸಂತ್ರಸ್ತೆಯರು ಆರೋಪಗಳನ್ನು ಮಾಡಿದ್ದರು. ಇದರ ಬೆನ್ನಲ್ಲೇ ಚಿತ್ರರಂಗದ ಹೈ ಪ್ರೊಫೈಲ್ ವ್ಯಕ್ತಿಗಳ ವಿರುದ್ದ ದಾಖಲಾದ ಮೂರನೇ ಎಫ್‌ಐಆರ್ ಇದಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply