LATEST NEWS
ಮಳಲಿ ಮಸೀದಿ ವಿವಾದ – ನವೆಂಬರ್ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ಮಂಗಳೂರು ಅಕ್ಟೋಬರ್ 17 : ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ.
ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ. ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು. ಇನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಯಕ್ಕೆ ಇಲ್ಲ ಎಂದು ಹೇಳಿದ್ದವು.
ಮಸೀದಿಯಲ್ಲಿ ಕಾಮಗಾರಿ ನಡೆಸಬಾರದು. ಕೋರ್ಟ್ ಕಮೀಷನರ್ ಮೂಲಕ ಸರ್ವೇ ನಡೆಸುವಂತೆ ವಿಎಚ್‌ಪಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತು ತೀರ್ಪು ಬರಬೇಕಾದ ಹಿನ್ನೆಲೆಯಲ್ಲಿ ಆದೇಶವನ್ನು ನವೆಂಬರ್ 9ಕ್ಕೆ ಮುಂದೂಡಿದೆ