Connect with us

    LATEST NEWS

    ಮಲ್ಪೆ – ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ನಿವೃತ್ತ ಶಿಕ್ಷಕ ಸ್ಥಳದಲ್ಲೇ ಸಾವು

    ಮಲ್ಪೆ ಅಗಸ್ಟ್ 1: ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕಲ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ ಸುವರ್ಣ ಎಂದು ಗುರುತಿಸಲಾಗಿದೆ.


    ಆದಿಉಡುಪಿ ಕಡೆಯಿಂದ ಮಲ್ಪೆ ಕಡೆ ಹೋಗುತ್ತಿದ್ದ ಬಸ್ ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸ್ಕೂಟರ್ ಸವಾರ ಬಸ್ಸಿನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply