ಮಂಗಳೂರು ನವೆಂಬರ್ 02: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ(ಎಎಸ್ಸೈ) ವಿಶ್ವನಾಥ್ (56) ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ.


ನವೆಂಬರ್ 1ರಂದು ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ –  ಸೈಬರ್ ವಂಚನೆಗೆ ಬಲಿಯಾಗುತ್ತಿರುವ ಹಿರಿಯ ನಾಗರಿಕರು – ನಕಲಿ ಷೇರು ಮಾರುಕಟ್ಟೆ ನಂಬಿ 13 ಲಕ್ಷ ಕಳೆದುಕೊಂಡ ಮಹಿಳೆ

ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು ಎಂದು ತಿಳಿದುಬಂದಿದೆ

Share Information