Connect with us

LATEST NEWS

ರಿಕ್ಷಾ ಚಾಲಕ ಮಲ್ಪೆಯ ಮಹಮ್ಮದ್ ಪೈಜಲ್ ಮಿಸ್ಸಿಂಗ್

ಉಡುಪಿ, ಮಾರ್ಚ್ 30 : ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಮಲ್ಪೆಯ ಮಹಮ್ಮದ್ ಪೈಜಲ್ (36) ಎಂಬ ವ್ಯಕ್ತಿಯು ಮಾರ್ಚ್ 27 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ಪ್ತತೆಯಾಗಿರುತ್ತಾರೆ. ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್‌ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ.


5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ:9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *