LATEST NEWS
ಮಲ್ಪೆ ಬೀಚ್ ನಲ್ಲಿ ಸಮುದ್ರ ಅಲೆಗಳ ಹೊಡೆತಕ್ಕೆ ನೀರು ಪಾಲಾದ ಯುವಕ
ಉಡುಪಿ ಎಪ್ರಿಲ್ 21: ಮಲ್ಪೆ ಬೀಚ್ ನಲ್ಲಿ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಂಡ್ಯದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಐವರು ಗೆಳೆಯರೊಂದಿಗೆ ಪ್ರವಾಸಕ್ಕೆ ಬಂದಿದ್ದ ನಾಗೇಂದ್ರ ಮಲ್ಪೆ ಸಮುದ್ರ ತೀರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆ ಎತ್ತಿದರು. ಬಳಿಕ ತಮ್ಮ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರು ದಾರಿಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.