Connect with us

FILM

ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿಗೆ ಕೊರೊನಾ ಸೊಂಕು

ತಿರುವನಂತಪುರಂ: ಮಲೆಯಾಳಂ ನ ಸೂಪರ್ ಸ್ಟಾರ್ ನಟ ಮಮ್ಮುಟ್ಟಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನಾನು ನಿನ್ನೆ ಕೋವಿಡ್ ಪಾಸಿಟಿವ್ ಪರೀಕ್ಷೆ ಮಾಡಿದ್ದೇನೆ.


ಸ್ವಲ್ಪ ಜ್ವರ ಇದೆ. ನಾನು ಚೆನ್ನಾಗಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳ ನಿರ್ದೇಶನದಂತೆ ನಾನು ಮನೆಯಲ್ಲಿ ಸ್ವಯಂ ಪ್ರತ್ಯೇಕವಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಬೇಕೆಂದು ನಾನು ಬಯಸುತ್ತೇನೆ. ಎಲ್ಲಾ ಸಮಯದಲ್ಲೂ ಮಾಸ್ಕ್ ಬಳಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದಿದ್ದಾರೆ.

ಇನ್ನು ನಟ ಮಮ್ಮುಟ್ಟಿಗೆ ಕೋವಿಡ್-19 ಪಾಸಿಟಿವ್ ಬಂದಿದೆ, ಈ ಹಿನ್ನೆಲೆಯಲ್ಲಿ ಸಿಬಿಐ 5ರ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಮಮ್ಮುಟ್ಟಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಾರೈಸಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *