Connect with us

LATEST NEWS

ಮಹಿಳೆ ಮಾನಭಂಗಕ್ಕೆ ಯತ್ನ – ಆರೋಪಿ ಅರೆಸ್ಟ್

ಮಂಗಳೂರು ಫೆಬ್ರವರಿ 04: ಔಷಧಿ ಮಾತ್ರೆಯನ್ನು ಮಾರಾಟ ಮಾಡಲು ಬಂದಿದ್ದ ವ್ಯಕ್ತಿಯೊಬ್ಬ ಮಹಿಳೆ ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರಿನ ಕೊಳಂಬೆ ಗ್ರಾಮದ ಕಜೆಕೋಡಿ ಹೌಸ್ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮುಲ್ಕಿ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಎಂದು ಗುರುತಿಸಲಾಗಿದೆ.


ಕಜೆಕೋಡಿ ಹೌಸ್ ಎಂಬಲ್ಲಿ ಬೆಳಿಗ್ಗೆ 11ಗಂಟೆಗೆ ಕಸ್ತೂರಿ ಮಾತ್ರೆ ಗಳನ್ನು ಮಾರಾಟ ಮಾಡಲು ಬಂದ ಮೊಹಮ್ಮದ್ ಇಕ್ಬಾಲ್ ಮಹಿಳೆಯ ಕೈ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ.
ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

Advertisement
Click to comment

You must be logged in to post a comment Login

Leave a Reply