Connect with us

LATEST NEWS

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಪಿಂಪ್ ಸೆರೆ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಪಿಂಪ್ ಸೆರೆ

ಮಂಗಳೂರು ನವೆಂಬರ್ 19: ಮಂಗಳೂರು ನಗರದ ಮಠದಕಣಿ 1 ನೇ ಕ್ರಾಸ್ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ(ಪಿಂಪ್) ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ದೇರೆಬೈಲ್ ಕುಂಟಿಕಾನ ನಿವಾಸಿ ಮೇಘರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಮಠದಕಣಿ 1 ನೇ ಅಡ್ಡ ರಸ್ತೆಯಲ್ಲಿರುವ ಸ್ಕೋಡಾ ಕಾರ್ ಸರ್ವಿಸ್ ಸೆಂಟರ್ ನ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ
ಬಂಧಿತ ಆರೋಪಿಯಿಂದ 2 ಮೊಬೈಲ್ ಫೋನ್, ಲ್ಯಾಪ್ ಟಾಪ್, ನಗದು ಹಣ ರೂ. 6,000/-, 2 ಬೈಕ್, ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *