ಪುತ್ತೂರು ನವೆಂಬರ್ 20: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ ಡ್ರಗ್ ಪೆಡ್ಲರ್ ಒಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಮಹಮ್ಮದ್ ಮುಸ್ತಾಫ ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ:15-11-2025 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ, ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತು MDMA ನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸದ್ರಿ ಬಾಡಿಗೆ ಕೋಣೆಯಲ್ಲಿ ಆರೋಪಿ ಯು ಅಕ್ರಮವಾಗಿ 14 ಗ್ರಾಂ ನಿಷೇದಿತ ಮಾದಕ ವಸ್ತು MDMA ನ್ನು ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಆರೋಪಿ ಪುತ್ತೂರು ಕಬಕ ನಿವಾಸಿ ಮಹಮ್ಮದ್ ಮುಸ್ತಪಾ (36) ಎಂಬಾತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 109/2025 ಕಲಂ;- 8(C),22(b) NDPS ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.
Read This – ಸುಳ್ಯ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ
ಆರೋಪಿ ಮಹಮ್ಮದ್ ಮುಸ್ತಪಾ ವಿರುದ್ಧ ಈಗಾಗಲೇ, ಪುತ್ತೂರು ನಗರ ಠಾಣೆಯಲ್ಲಿ ಅಕ್ರ:141/2015 ಪೋಕ್ಸೊ ಪ್ರಕರಣ ದಾಖಲಾಗಿ, ಸದ್ರಿ ಪ್ರಕರಣದಲ್ಲಿ ಮೂರು ವರ್ಷ ಜಯಲು ಶಿಕ್ಷೆ ವಿಧಿಸಲಾಗಿರುತ್ತದೆ.
ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 48/2024, 108/2024 ರಲ್ಲಿ ಮಾದಕವಸ್ತು ಮಾರಾಟದ ಪ್ರಕರಣಗಳು ದಾಖಲಾಗಿರುತ್ತದೆ.