ಕರಾವಳಿ ಹಿಂದೂ ಸಂಘಟನೆ ಮುಖಂಡರ ಹತ್ಯೆಗೆ ಸ್ಕೇಚ್ ಹಾಕಿದ ಪ್ರಮುಖ ಆರೋಪಿ ಬಂಧನ

ಮಂಗಳೂರು ಜನವರಿ 14 ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಶಂಕೆಯ ಆಧಾರದ ಮೇಲೆ ಕಾಸರಗೋಡಿನ ಕುಖ್ಯಾತ್ ಡಾನ್ ಒಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಗುಪ್ತಚರ ಇಲಾಖೆ ಕರಾವಳಿಯ ಹಿಂದೂ ಸಂಘಟನೆಯ ಮುಖಂಡರಿಗೆ ಜೀವ ಬೆದರಿಕೆ ಇರುವ ಬಗ್ಗೆ ಇದೆ ಎಂದು ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿತ್ತು.

ಈ ಸಂಬಂಧ ಕಾಸರಗೋಡಿನ ಕುಖ್ಯಾತ ಡಾನ್ ಬಂಧಿಸಲಾಗಿದ್ದು, ಈತ ಅರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಇತರ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಹೇಳಲಾಗಿದ್ದು, ದೆಹಲಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದಾಳಿ ಮುಹತಾಸಿಂ ಅಲಿಯಾಸ್ ತಾಸಿಂ ಯಾನೆ ಡಾನ್ ಎಂಬಾತನನ್ನು ಬಂಧಿಸಿದ್ದಾರೆ.

ಹತ್ಯೆಗೆ ಸಂಚು ರೂಪಿಸಿದ ಶಂಕೆಯಲ್ಲಿ ಕಾಸರಗೋಡು ಜಿಲ್ಲೆಯ ಚೆಮ್ನಾಡ್ ಪಂಚಾಯಿತಿ ವ್ಯಾಪ್ತಿಯ ಚೆಂಬರಿಕ ನಿವಾಸಿ, ಸಿ.ಎಂ ಮುಹತಾಸಿಂ ಅಲಿಯಾಸ್ ತಾಸಿಂ ಯಾನೆ ಡಾನ್(41)ಎಂಬುವನನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ಡಾನ್ ಉಗ್ರ ಸಂಘಟನೆ ಐಸಿಸ್ ನಂಟು ಹೊಂದಿರುವ ಶಂಕೆ ಇದ್ದು ಆರ್‌ಎಸ್‌ಎಸ್ ಮುಖಂಡರ ಹತ್ಯೆಗೆ ಸ್ಕೆಚ್ ಹಾಕುವಲ್ಲಿ ಮುಹತಾಸಿಂ ಪ್ರಮುಖ ಪಾತ್ರ ವಹಿಸಿರುವ ಅನುಮಾನಗಳಿವೆ ಎಂದು ಹೇಳಲಾಗಿದೆ.

ಕರಾವಳಿಯ ಪ್ರಮುಖ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ವಿಎಚ್ ಪಿ ಮುಖಂಡರಾದ ಶರಣ್ ಪಂಪವೆಲ್ ಹಾಗೂ ಜಗದೀಶ್ ಕಾರಂತ ಅವರಿಗೆ ಎಚ್ಚರಿಕೆ ಇರಲು ತಿಳಿಸಲಾಗಿತ್ತು.

ಆರ್‌ಎಸ್‌ಎಸ್ ಮುಖಂಡರ ಹತ್ಯೆಗೆ ಸಂಚು ನಡೆಯುತ್ತಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಲಭಿಸಿದ ಬೆನ್ನಲ್ಲೇ ಕಾಸರಗೋಡಿಗೆ ಬಂದ ದೆಹಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿರುವುದು ಗಮನಾರ್ಹ. ಕಾಸರಗೋಡಿಗೆ ಆಗಮಿಸಿದ್ದ ದೆಹಲಿ ಪೊಲೀಸರು ಅತ್ಯಂತ ರಹಸ್ಯ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಸ್ಥಳೀಯ ಪೊಲೀಸರ ಸಹಕಾರ ದಿಂದ ಕಾಸರಗೋಡು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಿದ ಬಳಿಕ ದೆಹಲಿಗೆ ಕರೆದೊಯ್ಯದಿದ್ದಾರೆ.ಆದರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸ್ಥಳೀಯ ಪೊಲೀಸರು ನಿರಾಕರಿಸಿದ್ದಾರೆ.

Facebook Comments

comments