DAKSHINA KANNADA
ಕಡಬ – ಸಾಲ ತೀರಿಸಲು ಕಳ್ಳತನಕ್ಕೆ ಇಳಿದಿದ್ದ ಯುವಕ ಅರೆಸ್ಟ್
ಕಡಬ ಜನವರಿ 17: ಮಾಡಿದ ಸಾಲ ತೀರಿಸಲು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂದು ಗುರುತಿಸಲಾಗಿದೆ. ಕಳ್ಳತನ ನಡೆದ ಐದೇ ದಿನದಲ್ಲಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
102 ನೆಕ್ಕಿಲಾಡಿ ಗ್ರಾಮದ ನಿವಾಸಿ ಆಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ… ಅವರು ರವಿವಾರ ಪತ್ನಿ ಹಾಗೂ ಮಗನೊಂದಿಗೆ ಮನೆಗೆ ಬೀಗ ಹಾಕಿ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದಾಗ ಕಳವು ನಡೆದಿತ್ತು.
ಕಳ್ಳತನ ನಡೆದಿರುವ ಮನೆಯಿಂದ ಕೂಗಳತೆ ದೂರದಲ್ಲಿರುವ ಮನೆಯ ಯುವಕನೇ ಆರೋಪಿ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿತ್ತು. ಪ್ರಕರಣದ ಬೆನ್ನತ್ತಿದ ಪೊಲೀಸರು ಹಲವು ಮಹತ್ವದ ಸುಳಿವುಗಳ ಆಧಾರದಲ್ಲಿ ಸಿನು ಕುರಿಯನ್‌ನನ್ನು ವಶಕ್ಕೆ ಪಡೆದಿದ್ದರು. ಬೈಕ್‌ನಲ್ಲಿ ಬಂದು ಕೊಟ್ಟಿಗೆಯಲ್ಲಿದ್ದ ಪಿಕ್ಕಾಸಿನಿಂದ ಬಾಗಿಲು ಮುರಿದು ಕಳವು ಮಾಡಿರುವುದಾಗಿ ಆತ ಪೊಲೀಸರಲ್ಲಿ ತಿಳಿಸಿದ್ದಾನೆ. ಆರೋಪಿ ಸಾಲದ ಸುಳಿಯಲ್ಲಿ ಸಿಲುಕಿದ್ದೇ ಕಳವಿಗೆ ಕಾರಣ ಎಂದು ತಿಳಿದುಬಂದಿದೆ. ಈತ ಕಡಬದ ಜವಳಿ ಮಳಿಗೆಯಲ್ಲಿ ಕೆಲಸಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಳವಾಗಿದ್ದ ಚಿನ್ನವನ್ನು ಹಾಗೂ ಸ್ವಲ್ಪ ಹಣವನ್ನೂ ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.