ಬೆಳ್ತಂಗಡಿ ನವೆಂಬರ್ 28: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಯುವಕನ್ನು ವೇಣೂರು ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ.

ಸಂತ್ರಸ್ತ ಬಾಲಕಿ ನೀಡಿರುವ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಮನೆಗೆ ಕರೆದುಕೊಂಡು ಹೋಗಿ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೇಣೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಎರಡೂವರೆ ತಿಂಗಳ ಗರ್ಭವತಿ ಎಂದು ತಿಳಿಸಿದ್ದಾರೆ.



