Connect with us

    LATEST NEWS

    ಮೂಕ ಪ್ರಾಣಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ರಾಕ್ಷಸರು…ಒಬ್ಬ ಕಿರಾತಕ ಅಂದರ್

    ಮಂಗಳೂರು ಎಪ್ರಿಲ್ 23: ಮೂಕಪ್ರಾಣಿ ನಾಯಿಯನ್ನು ವಾಹನಗಳಿಗೆ ಕಟ್ಟಿ ಎಳೆದೊಯ್ಯುವ ನೀಚ ಘಟನೆಯನ್ನು ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಕೇಳಿದ್ದೇವೆ, ಆದರೆ ಬುದ್ದಿವಂತರ ಜಿಲ್ಲೆಯಂದೇ ಕರೆಯುವ ದಕ್ಷಿಣಕನ್ನಡದಲ್ಲೂ ಇಂತಹ ರಾಕ್ಷಸರಿದ್ದಾರೆ ಎನ್ನುವುದು ಇತ್ತೀಚೆಗೆ ನಡೆದ ಘಟನೆಯಿಂದ ಸಾಭೀತಾಗಿದೆ.


    ನಾಯಿಯೊಂದನ್ನು ಹಗ್ಗಕಟ್ಟಿ ಬೈಕ್ ನಲ್ಲಿ ಎಳೆದುಕೊಂಡು ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುರತ್ಕಲ್ ಎನ್‌ಐಟಿಕೆ ಸಮೀಪ ನಡೆದಿದೆ ಎನ್ನಲಾದ ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಏಪ್ರಿಲ್ 15ರಂದು ನಡೆದಿರುವ ಘಟನೆಯನ್ನು ಯುವಕರೊಬ್ಬರು ಚಿತ್ರೀಕರಿಸಿದ್ದು, ಅದನ್ನು ಅನಿಮಲ್ ಕೇರ್ ಟ್ರಸ್ಟ್ ಜತೆ ಹಂಚಿಕೊಂಡಿದ್ದಾರೆ. ಅದರಂತೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡಲಾಗಿದೆ.

    ಎಪ್ರಿಲ್ 15ರಂದು ರಾತ್ರಿ ಸುಮಾರು 8.30ಕ್ಕೆ ಬೈಕ್‌ನ ಹಿಂದೆ ಹಗ್ಗದಲ್ಲಿ ನಾಯಿಯನ್ನು ಕಟ್ಟಿ ಇಬ್ಬರು ಸಾಗುತ್ತಿದ್ದರು. ಅದರ ಹಿಂದೆಯೇ ಇನ್ನೊಂದು ನಾಯಿಕೂಡಾ ಸ್ವಲ್ಪ ದೂರ ಓಡೋಡಿ ಬಂದಿದೆ. ಚಿತ್ರೀಕರಿಸಿದವರು ಹೈವೇಯಲ್ಲಿ ಇದ್ದರೆ ದುಷ್ಕರ್ಮಿಗಳು ಸರ್ವಿಸ್ ರಸ್ತೆಯಲ್ಲಿದ್ದರು. ಕೆಲ ಹೊತ್ತಿನಲ್ಲೇ ಸೇತುವೆ ಬಂದ ಕಾರಣ ಆರೋಪಿಗಳು ತಪ್ಪಿಸಿಕೊಂಡಿದ್ದರು. ಈ ನಡುವೆ ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಕರಣದ ಬಗ್ಗೆ ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದರು. ಡಿಸಿಪಿ ಹರಿರಾಂ ಶಂಕರ್ ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು.

    ಇದೀಗ ತನಿಖೆ ಆರಂಭಿಸಿದ ಪೊಲೀಸರು ಕೊಪ್ಪಳ ಮೂಲದ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿನನ್ನು ಕೊಪ್ಪಳದ ನಿವಾಸಿ ನೀಲಪ್ಪ ಎಂದು ಗುರುತಿಸಲಾಗಿದೆ.  ಇನ್ನೋರ್ವ ತಪ್ಪಿಸಿಕೊಂಡಿದ್ದಾನೆ. ನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply