LATEST NEWS
ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ- ಆಸ್ಪತ್ರೆಗೆ ದಾಖಲು
ಮಂಗಳೂರು, ಆಗಸ್ಟ್ 23: ಯುವಕನೊಬ್ಬ ತನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸದ್ಯ ಯುವಕನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಬೆಳ್ಳಾರೆ ಸಮೀಪದ ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.
You must be logged in to post a comment Login