LATEST NEWS
ಅಂಗಡಿ ಎದುರು ಬೈಕ್ ನಿಲ್ಲಿಸಿದ್ದಕ್ಕೆ ಸವಾರನಿಗೆ ದೊಣ್ಣೆಯಲ್ಲಿ ಹೊಡೆದ ಕಟ್ಟಡ ಮಾಲೀಕರು
ಮಂಗಳೂರು ಡಿಸೆಂಬರ್ 30 : ಅಂಗಡಿ ಮುಂದೆ ಬೈಕ್ ನಿಲ್ಲಿಸಿದ್ದಕ್ಕೆ ಕಟ್ಟಡ ಮಾಲೀಕರು ಬೈಕ್ ಸವಾರನಿಗೆ ದೋಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ನಡೆದಿದೆ. ಇದೀಗ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಲ್ಲೆಗೊಳಗಾದ ಯುವಕನನ್ನು ಗುತ್ತಕಾಡು ನಿವಾಸಿ ನರೇಂದ್ರ ಎಂದು ಗುರುತಿಸಲಾಗಿದ್ದು, ಇವರು ಮಂಗಳೂರಿನಲ್ಲಿ ನೌಕರಿ ಹೊಂದಿದ್ದರಿಂದ ಕಿನ್ನಿಗೋಳಿ ಪೇಟೆಯಲ್ಲಿ ಬೈಕ್ ನಿಲ್ಲಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಎಂದಿನಂತೆ ಇಂದು ಸಹ ಬೆಳಗ್ಗೆ ಬೈಕ್ ನಿಲ್ಲಿಸುತ್ತಿದ್ದಂತೆ ಕಟ್ಟಡ ಮಾಲೀಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರು ವ್ಯಕ್ತಿಗಳು ನರೇಂದ್ರ ಅವರನ್ನು ಹಿಡಿದಿದ್ದು, ಓರ್ವ ದೊಣ್ಣೆಯಿಂದ ಹಲ್ಲೆ ನಡೆಸುತ್ತಿದ್ದಾರೆ. ಹಲ್ಲೆಯಿಂದ ನರೇಂದ್ರ ಅವರ ಕೈ ಮುರಿತಕ್ಕೊಳಗಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಕಟ್ಟಡಕ್ಕೂ, ಪಾರ್ಕಿಂಗ್ ಜಾಗಕ್ಕೂ ಸಂಬಂಧವಿಲ್ಲ ಎಂದು ಕಟ್ಟಡ ಮಾಲಿಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
You must be logged in to post a comment Login