UDUPI
ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ

ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ
ಉಡುಪಿ, ಸೆಪ್ಟೆಂಬರ್ 26 : ನಿನ್ನೆ ಮಧ್ಯಾಹ್ನ ಮನೆಯಿಂದ ಹೊರಟು ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಇಂದು ರೈಲ್ವೇ ಹಳಿ ಮೇಲೆ ಪತ್ತೆಯಾಗಿರುವ ಘಟನೆ ಉಡುಪಿಯ ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅದಮಾರು ಮಠದ ಬಳಿಯ ನಿವಾಸಿ ೪೮ ರ ಹರೆಯದ ರವಿ ದೇವಾಡಿಗ ಮೃತ ವ್ಯಕ್ತಿ. ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಎರ್ಮಾಳಿನ ಪೂಂದಾಡು ಬಳಿ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ತಕ್ಷಣ ಸ್ಥಳೀಯ ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Continue Reading