LATEST NEWS
ಅದ್ದೂರಿಯಾಗಿ ಮಗಳ ಬರ್ತ್ ಡೇ ಆಚರಿಸಬೇಕಿದ್ದ ತಂದೆ ನೇಣಿಗೆ ಶರಣು….!!

ಮಂಗಳೂರು ಮಾರ್ಚ್ 08: ತನ್ನ ಮಗಳ ಹುಟ್ಟುಹಬ್ಬಕ್ಕೆ ವಾರವಿರುವಾಗಲೇ ತಂದೆ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಕೊಲ್ಯ ಕಣೀರು ತೋಟದ ಕಣೀರುಬೀಡುವಿನ ಪ್ರವೀಣ್ ಪೂಜಾರಿ (34) ಎಂದು ಗುರುತಿಸಲಾಗಿದೆ.
ಪ್ರವೀಣ್ ಖಾಸಗಿ ಬಸ್ ನಲ್ಲಿ ಚೆಕ್ಕರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಸಂಜೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು. ಈ ವೇಳೆ ಅವರ ತಾಯಿ ಮನೆ ಹೊಗಡೆ ಬೀಡಿ ಕಟ್ಟುವ ಕೆಲಸದಲ್ಲಿ ತೊಡಗಿದ್ದರು. ಸಂಜೆ 7.30ಕ್ಕೆ ಪತ್ನಿ ಕೆಲಸದಿಂದ ಮರಳಿದಾಗ ಪಕ್ಕಾಸಿಗೆ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು.

ಮುಂದಿನ ವಾರ ಮಗಳ ಐದನೇ ವರ್ಷದ ಹುಟ್ಟುಹಬ್ಬವಿದ್ದು, ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಬೇಕೆಂದು ಮನೆಯಲ್ಲಿ ಹೇಳುತ್ತಿದ್ದರು. ಆದರೆ ದುರ್ದೈವವಶಾತ್ ಅದಕ್ಕೂ ಮೊದಲು ಅವರು ಇಹಲೋಕ ತ್ಯಜಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.