Connect with us

    KARNATAKA

    ಪತ್ನಿ ಸಾವಿಗೆ ಮನನೊಂದು ನಾಲ್ವರು ಮಕ್ಕಳಿಗೆ ವಿಷ ಹಾಕಿ ಮಾಜಿ ಸೈನಿಕ ಆತ್ಮಹತ್ಯೆಗೆ ಶರಣು

    ಬೆಳಗಾವಿ ಅಕ್ಟೋಬರ್ 23: ಬ್ಲಾಕ್ ಫಂಗಸ್ ನಿಂದ ಪತ್ನಿಯನ್ನು ಕಳೆದುಕೊಂಡು ದು:ಖದಲ್ಲಿದ್ದ ಮಾಜಿ ಸೈನಿಕರೊಬ್ಬರು ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.
    ಬೋರಗಲ್ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನಾ ಹಾದಿಮನಿ (8) ಆತ್ಮಹತ್ಯೆಗೆ ಶರಣಾದವರು.


    ಜುಲೈ 6 ರಂದು ಗೋಪಾಲ್ ಅವರ ಪತ್ನಿ ಜಯಾ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಗೋಪಾಲ್ ಅವರು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಾಲ್ವರು ಮಕ್ಕಳ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ.


    ಮೃತ ದುರ್ದೈವಿ ಗೋಪಾಲ್ ಹಾದಿಮನಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಇಬ್ಬರು ಮಕ್ಕಳು ಸಂಕೇಶ್ವರ ಪಟ್ಟಣದಲ್ಲಿರುವ ಕಾಲೇಜಿಗೆ ಹೋಗುತ್ತಿದ್ದರು. ಇನ್ನೂಳಿದ ಇಬ್ಬರು ಮಕ್ಕಳು ಗ್ರಾಮದಲ್ಲೇ ಶಾಲೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಸಂಕೇಶ್ವರ ಪೊಲೀಸ್ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *