Connect with us

BANTWAL

ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ

ಬಂಟ್ವಾಳ ಎಪ್ರಿಲ್ 29: ವ್ಯಕ್ತಿಯೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗೂಡಿನಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ನಿವಾಸಿ ನಿರಂಜನ್ ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ರಾತ್ರಿಯಿಂದ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಒಂದು ಅನಾಥವಾಗಿ ಬಿದ್ದಿತ್ತು, ಇಂದೂ ಕೂಡ ಬೈಕ್ ಅಲ್ಲೆ ಇದ್ದ ಹಿನ್ನಲೆ ಅನುಮಾನಗೊಂಡ ಗೂಡಿನಬಳಿ ಪರಿಸರದ ಯುವಕರು ನದಿಯಲ್ಲಿ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ
ಸ್ಥಳೀಯ ಈಜುಗಾರರಾದ ಹಾರಿಸ್, ಮುಹಮ್ಮದ್ ಮಮ್ಮು, ಇಬ್ರಾಹೀಂ, ಅಮ್ಮಿ, ಇಕ್ಬಾಲ್, ಶಮೀರ್ ಅವರ ತಂಡ ಮೃತದೇಹವನ್ನು ನದಿಯಲ್ಲಿ ಪತ್ತೆ ಹಚ್ಚಿದೆ.

ಬೈಕ್‌ನಲ್ಲಿ ದೊರೆತ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಹೆಸರು, ವಿಳಾಸ ಪತ್ತೆಯಾಗಿದೆ. ಮೃತ ನಿರಂಜನ್ ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ವರ್ಷದ ಹಿಂದೆ ಊರಿಗೆ ಬಂದಿದ್ದರು. ವಿವಾಹಿತರಾಗಿರುವ ಅವರಿಗೆ ಒಂದು ಹೆಣ್ಣು ಮಗು ಇದೆ ಎಂದು ತಿಳಿದು ಬಂದಿದೆ.

ಮೃತನ ಕುಟುಂಬಿಕರಿಗೆ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.