Connect with us

KARNATAKA

ಬೆಂಗಳೂರು – ಹಣದ ಲೆಕ್ಕಕೊಡದಿದ್ದಕ್ಕೆ ಮಗನಿಗೆ ಬೆಂಕಿ ಹಚ್ಚಿ ಕೊಂದ ಅಪ್ಪ….!!

ಬೆಂಗಳೂರು ಎಪ್ರಿಲ್ 07:ವ್ಯಾಪಾರದಲ್ಲಿ ಹಣದ ಲೆಕ್ಕವನ್ನು ಸರಿಯಾಗಿ ಕೊಡಲಿಲ್ಲ ಎಂದು ಅಪ್ಪ ಹಾಡು ಹಗಲೇ ಮಗನಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಪ್ರಿಲ್ 1 ರಂದು ಈ ಘಟನೆ ನಡೆದಿದ್ದು ಎಂದು ಹೇಳಲಾಗಿದ್ದು, ಬೆಂಕಿ ಹಚ್ಚಿದ ಹಿನ್ನಲೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗ ಇಂದು ಸಾವನಪ್ಪಿದ್ದಾರೆ.


ಆಜಾದ್​ ನಗರದ ನಿವಾಸಿ ಸುರೇಂದ್ರ ಅವರಿಗೆ ಅರ್ಪಿತ್ ಎಂಬ ಮಗನಿದ್ದಾನೆ.  ಸುರೇಂದ್ರ ಅರಿಗೆ ಕಟ್ಟಡ ಕಾಮಗಾರಿಗೆ ಸಂಬಂಧಿಸ ವ್ಯವಹಾರ ಇದ್ದು , ಮಗ ಅರ್ಪಿತ್ ತಂದೆಗೆ ಕೆಲದಲ್ಲಿ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಈ ನಡುವೆ ಕಳೆದ ಕೆಲವು ತಿಂಗಳಿನಿಂದ ಮಗ ವ್ಯವಹಾರದ ಹಣದ ಮಾಹಿತಿ ಸರಿಯಾಗಿ ನೀಡುತ್ತಿಲ್ಲ ಎಂದು ಗಲಾಟೆ ನಡೆದಿದ್ದು,  ಇದರಿಂದ ಕೋಪಗೊಂಡ ಸುರೇಂದ್ರ ಮನೆಯೊಳಗೆ ತಮ್ಮ ಮಗನ ಮೇಲೆ ಪೆಟ್ರೋಲ್ ಸುರಿದಿದ್ದಾರೆ. ಪೆಟ್ರೋಲ್​ ಸುರಿದಿದ್ದರಿಂದ ಅರ್ಪಿತ್​ ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಅರ್ಪಿತ್​ ತನ್ನ ತಂದೆಗೆ ಬೇಡಿಕೊಂಡಿದ್ದಾರೆ. ಆದರೂ ಸುರೇಂದ್ರ ತನ್ನ ಮಗನ ಮೇಲೆ ಬೆಂಕಿ ಕಡ್ಡಿ ಗೀರಿ ಎಸೆದಿದ್ದಾರೆ. ಮೊದಲನೇ ಬಾರಿ ಬೆಂಕಿ ಹೊತ್ತದ ಕಾರಣ, ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಿ ಎಸೆದಿದ್ದಾರೆ. ಬಳಿಕ ಅರ್ಪಿತ್​ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ನಗರದ ತುಂಬೆಲ್ಲಾ ಓಡಾಡಿದ್ದಾರೆ.

ಅರ್ಪಿತ್​ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ದೇಹದ ಬಹುಪಾಲು ಭಾಗ ಸುಟ್ಟುಹೋಗಿತ್ತು. ಬಳಿಕ ಸ್ಥಳೀಯರು ಬೆಂಕಿ ನಂದಿಸಿ ಅರ್ಪಿತ್‌ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿಟ್ಟು ಅರ್ಪಿತ್​ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಮೃತಪಟ್ಟಿದ್ದಾರೆ. ಆರೋಪಿ ತಂದೆಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Click to comment

You must be logged in to post a comment Login

Leave a Reply