BELTHANGADI
ಬೆಳ್ತಂಗಡಿ – ಮೀನು ಹಿಡಿಯಲು ತೆರಳಿದ್ದ ಯುವಕ ನೀರು ಪಾಲು
ಬೆಳ್ತಂಗಡಿ ಅಕ್ಟೋಬರ್ 14: ಗೆಳೆಯರ ಜೊತೆ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ.
ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತ ಮೃತಪಟ್ಟಿರುವ ಯುವಕ. ಈತ ಭಾನುವಾರ ಗೆಳೆಯರೊಂದಿಗೆ ಮೀನು ಹಿಡಿಯಲು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ. ಈತನಿಗಾಗಿ ಸ್ಥಳೀಯರ ನೇತೃತ್ವದಲ್ಲಿ ನಡೆಸಿದ ಹುಡುಕಾಟದಲ್ಲಿ ಮೃತದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.