BELTHANGADI
ಬೆಳ್ತಂಗಡಿ – ಕೆರೆಗೆ ಜಾರಿ ಬಿದ್ದು ಪ್ರಾಣ ಕಳೆದುಕೊಂಡ ನವವಿವಾಹಿತ ಯುವಕ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬೆಳ್ತಂಗಡಿ ಮೇ 26 : 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತನೊಬ್ಬ ಮನೆಯ ಕೆರೆಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ.
ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇವರು ಕೃಷಿಕರಾಗಿದ್ದ ಇವರು ಕಳೆದ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ತಮ್ಮ ಮನೆಯ ಕೆರೆಗೆ ಮೇ.25 ಶನಿವಾರ ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ, ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login