ವಿಜಯಪುರ, ಫೆಬ್ರವರಿ 18 : ತಾನೇ ಪತ್ನಿ ಕೊಂದು ನಾಪತ್ತೆ ದೂರು ನೀಡಿದ್ದ ಆರೋಪಿ ಪತಿಯನ್ನು ಘಟನೆ ನಡೆದು 24 ದಿನಗಳ ಬಳಿಕ ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ.

ಸರೋಜಿನಿ (45) ಪತಿಯಿಂದಲೇ ದಾರುಣವಾಗಿ ಹತ್ಯೆಯಾದ ದುರ್ದೈವಿಯಾಗಿದ್ದು, ಆರೋಪಿ ಪ್ರಭು ರತ್ನಾಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿ ಸರೋಜಿನಿ ಹೆಸರಲ್ಲಿ ಆರೋಪಿ ರತ್ನಾಕರ್ ಸಾಲಮಾಡಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಕಳೆದ ಜನವರಿ 24ರಂದೂ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಆರೋಪಿ ಪತ್ನಿಗೆ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದ. ಬಳಿಕ ಶವವನ್ನು ಮನೆ ಆವರಣದಲ್ಲಿಯೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಟ್ಟು ಕತೆ ಕಟ್ಟಿ ದೇವರಹಿಪ್ಪರಗಿ ಪೊಲೀಸ್ ಠಾಣೆಗೆ ಕಂಪೊಲೀಸರಿಗೆ ದೂರು ನೀಡಿದ್ದ. ಸರೋಜನಿ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ವೇಳೆ ಪ್ರಭು ರತ್ನಾಕರನ ಮೇಲೆಯೇ ಅನುಮಾನಗೊಂಡಿದ್ದಾರೆ. ಹೀಗಾಗಿ ಆತನನ್ನು ಕರೆಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಯಲಾಗಿದೆ. ಹೂತಿರುವ ಶವ ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬAಧಿಕರಿಗೆ ಶವ ಹಸ್ತಾಂತರಿಸಲಾಗಿದೆ. ಸರೋಜಿನಿ ತಾಯಿ ಪ್ರಭು ರತ್ನಾಕರ್ ವಿರುದ್ಧ ದೂರು ನೀಡಿದ್ದು, ಪೊಲೀಸರಿಂದ ತನಿಖೆ ಮುಂದುವರೆಸಿದ್ದಾರೆ.