Connect with us

    LATEST NEWS

    ವಿದೇಶಿ ಮಹಿಳಾ ಪ್ರವಾಸಿಗರೊಬ್ಬರ ಮೈಮುಟ್ಟಿ ಕಿರುಕುಳ ನೀಡಿದ ಸ್ಥಳೀಯ ವ್ಯಕ್ತಿ…!!

    ಜೈಪುರ ಜುಲೈ 04 : ವಿದೇಶಿ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜೈಪುರದಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ರಾಜಸ್ಥಾನದ ಜೈಪುರ ನಗರದ ಸಿಂಧಿ ಕ್ಯಾಂಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಯಾವಾಗ ಎಂಬುದು ಇನ್ನೂ ದೃಢಪಟ್ಟಿಲ್ಲ. ವಿಡಿಯೋದಲ್ಲಿ ಮಹಿಳಾ ಪ್ರವಾಸಿ ಹಾಗೂ ಅವರ ಸಂಗಾತಿ ಮತ್ತು ಸ್ಥಳೀಯ ವ್ಯಕ್ತಿಯೊಬ್ಬ ಪ್ರವಾಸಿ ಮಹಿಳೆ ಜತೆ ಪದೇ ಪದೇ ಅಸಭ್ಯವಾಗಿ ಸ್ಪರ್ಶ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬರುತ್ತಿದೆ. ಮಹಿಳಾ ಪ್ರವಾಸಿ ಈ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು “ಸುಂದರ” ಮತ್ತು “ಧನ್ಯವಾದ” ಪದಗಳನ್ನು ಬಳಸುತ್ತಿದ್ದರೂ ಆತ ಮಾತ್ರ ಅದನ್ನು ಲೆಕ್ಕಿಸದೇ ಮಹಿಳೆಯನ್ನು ಸ್ಪರ್ಶಿಸುತ್ತಲೇ ನಡೆಯುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

    ನೋಡಲು 40ರ ಆಸುಪಾಸಿನಲ್ಲಿರುವಂತೆ ಕಾಣುತ್ತಿರುವ ವ್ಯಕ್ತಿ ಮಹಿಳೆಯ ಭುಜ-ಎದೆ ಮೇಲೆ ಕೈ ಹಾಕುವ ಮೊದಲು ” ಇಟ್ಸ್​ ಮೈ ಪ್ಲಸರ್​​’’ ಎಂದು ಹೇಳುತ್ತಿದ್ದಾನೆ. ಹಾಗೆ ಸಂತೋಷ ಎನ್ನುತ್ತಲೇ ಮತ್ತೊಂದು ಕಡೆಯಿಂದ ಮಹಿಳಾ ಪ್ರವಾಸಿಯ ಇನ್ನೊಂದು ತೋಳನ್ನು ಹಿಡಿಯುತ್ತಾನೆ. ಒಂದು ಕ್ಷಣದಲ್ಲಿ ಅವರ ದೇಹದ ಇತರ ಭಾಗಗಳನ್ನು ಸ್ಪರ್ಶಿಸುವ ಯತ್ನ ಮಾಡುತ್ತಾನೆ. ಈ ವಿಡಿಯೋಗೆ ಟ್ವೀಟಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಯಾರಿಂದಲೂ ಔಪಚಾರಿಕ ದೂರು ದಾಖಲಾಗದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿರುವುದನ್ನು ಸಂಬಂಧಪಟ್ಟ ಪೊಲೀಸ್ ಠಾಣೆ ಗಮನಕ್ಕೆ ತಂದಿದೆ. “ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿಯನ್ನು ಪೊಲೀಸರು ಹುಡುಕುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply