BANTWAL
ಸಾಯಲು ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದು ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ರಕ್ಷಣೆ ಮಾಡಿದ ಸಿದ್ದೀಕ್

ಬಂಟ್ವಾಳ ಮಾರ್ಚ್ 04: ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದಿದ್ದರು ಎಂದು ಹೇಳಲಾಗಿದೆ. ನದಿಗೆ ಹಾರಿದ ಮಾಹಿತಿ ಪಡೆದ ಕೂಡಲೇ ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್, ಶಂಕರಯ್ಯ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದರು.

ಉಪವಾಸವಿದ್ದ ಸಂದರ್ಭ ನಡೆಸಿದ ರಕ್ಷಣಾ ಕಾರ್ಯಕ್ಕೆ ಸಾರ್ವಜನಿಕರು ಅಭಿನಂದಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ. ನಂತರ ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.