Connect with us

    LATEST NEWS

    ಅಪ್ರಾಪ್ತ ಬಾಲಕಿಗೆ ಕಿರುಕುಳ – ಆರೋಪಿಗೆ ಬಿತ್ತು ಧರ್ಮದೇಟು…!!

    ಮುಲ್ಕಿ ಡಿಸೆಂಬರ್ 18: ಬೈಕ್ ನಲ್ಲಿ ಬಾಲಕಿಯೊಬ್ಬಳನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಮುಲ್ಕಿ ಕೆರೆಕಾಡು ಎಂಬಲ್ಲಿ ನಡೆದಿದೆ.


    ಆರೋಪಿಯು ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ಇನ್ನು ಶನಿವಾರದಂದು ಮತ್ತೆ ಅದೇ ಪ್ರದೇಶದಲ್ಲಿ ಆರೋಪಿ ಕಂಡು ಬಂದ ಹಿನ್ನೆಲೆಯಲ್ಲಿ ಆತನನ್ನು ಕಟ್ಟಿ ಹಾಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ.


    ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯ ದೂರಿನ ಮೇರೆಗೆ ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಹಾಗೂ ಗಲಭೆ ಪ್ರಕರಣದ ದೂರು ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply