LATEST NEWS
83,00,00,00,00,000 ರೂಪಾಯಿ ಕ್ರಿಪ್ಟೋ ಕರೆನ್ಸಿ ವಂಚಕ ಕೇರಳದಲ್ಲಿ ಅರೆಸ್ಟ್

ನವದೆಹಲಿ ಮಾರ್ಚ್ 14: ನಮ್ಮ ದೇಶದ ಹಲವು ರಾಜ್ಯಗಳ ವರ್ಷದ ಬಜೆಟ್ ಗಿಂತಲೂ ಹೆಚ್ಚು ಕ್ರಿಪ್ಟೋ ಕರೆನ್ಸಿ ವಂಚನೆ ಮಾಡಿದ ಆರೋಪಿಯನ್ನು ಕೇರಳದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.
ಬಂಧಿತ ಆರೋಪಿ ಅಲೆಕ್ಸೆಜ್ ಬೆಸಿಯೊಕೊವ್ ಎಂದು ಗುರುತಿಸಲಾಗಿದೆ. ಅಮೇರಿಕಾದಲ್ಲಿ ಈತ ಮಾಡಿದ್ದು, ಬರೋಬ್ಬರಿ 8 ಲಕ್ಷ ಕೋಟಿ ರೂಪಾಯಿಯ ಕ್ರಿಪ್ಟೋ ಕರೆನ್ಸಿ ವಂಚನೆ. ರಾನ್ಸಮ್‌ವೇರ್, ಕಂಪ್ಯೂಟರ್ ಹ್ಯಾಕಿಂಗ್ ಮತ್ತು ಮಾದಕವಸ್ತು ವಹಿವಾಟುಗಳಂತಹ ಅಪರಾಧ ಚಟುವಟಿಕೆಗಳ ಆದಾಯವನ್ನು ಅಕ್ರಮವಾಗಿ ವರ್ಗಾಯಿಸಲು ‘ಗ್ಯಾರಂಟೆಕ್ಸ್’ ಎಂಬ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರವನ್ನು ಸ್ಥಾಪಿಸಿದ್ದ.
ಬೆಸಿಯೊಕೊವ್, ದೇಶದಿಂದ ಪಲಾಯನ ಮಾಡಲು ಯೋಜಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಎಸ್ ಸೀಕ್ರೆಟ್ ಸರ್ವಿಸ್ ದಾಖಲೆಗಳ ಪ್ರಕಾರ, ಬೆಸಿಯೊಕೊವ್ ಸುಮಾರು ಆರು ವರ್ಷಗಳ ಅವಧಿಯಲ್ಲಿ ಗ್ಯಾರಂಟೆಕ್ಸ್ ನ್ನು ನಿಯಂತ್ರಿಸಿ ನಿರ್ವಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಇದು ಅಂತರರಾಷ್ಟ್ರೀಯ ಕ್ರಿಮಿನಲ್ ಸಂಘಟನೆಗಳಿಂದ (ಭಯೋತ್ಪಾದಕ ಸಂಘಟನೆಗಳು ಸೇರಿದಂತೆ) ಕನಿಷ್ಠ $96 ಬಿಲಿಯನ್ (ರೂ. 8 ಲಕ್ಷ ಕೋಟಿಗೂ ಹೆಚ್ಚು) ಕ್ರಿಪ್ಟೋಕರೆನ್ಸಿ ವಹಿವಾಟುಗಳಲ್ಲಿ ಹಣ ವರ್ಗಾವಣೆಗೆ ಅನುಕೂಲ ಮಾಡಿಕೊಟ್ಟು ನಿರ್ಬಂಧಗಳನ್ನು ಉಲ್ಲಂಘಿಸಿದೆ.