LATEST NEWS
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಮ್ಯಾನೇಜರ್ ಬಂಧನ
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಮ್ಯಾನೇಜರ್ ಬಂಧನ
ಮಂಗಳೂರು ಅಕ್ಟೋಬರ್ 8: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಕಿರುಕುಳ ನೀಡಿದ್ದ ಆರೋಪಿ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಪ್ಪಳ ನಿವಾಸಿ ಅಬ್ದುಲ್ ಲತೀಫ್ ಖಾದರ್(32) ಎಂದು ಗುರುತಿಸಲಾಗಿದ್ದು, ಈತ ಹಿಂದೂಸ್ಥಾನ್ ಬಾವ ಬಿಲ್ಡರ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಲೈಂಗಿಕ ಕಿರುಕುಳಕ್ಕೆ ಒಳಗಾದ ಯುವತಿ ಕೋಟೆಕಾರ್ ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಉದ್ಯೋಗಿಯಾಗಿದ್ದಳು. ಆರೋಪಿ ಅಬ್ದುಲ್ ಲತೀಫ್ ಖಾದರ್ ಸಹೋದ್ಯೋಗಿಯಾಗಿರುವ ಯುವತಿ ಗೆ ಇಂದು ಮಧ್ಯಾಹ್ನ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಯುವತಿ ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಳು, ಈ ಹಿನ್ನಲೆಯಲ್ಲಿ ಆರೋಪಿಯನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಘಟನೆ ವಿರುದ್ದ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ವಿರುದ್ದ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿವೆ.