KARNATAKA
ಮಾಜಿ ಪ್ರಧಾನಿ ಮನೋಹನ್ ಸಿಂಗ್ ನಿಧನ ಹಿನ್ನಲೆ ನಾಳೆ ( ಡಿಸೆಂಬರ್ 27)ಸರಕಾರಿ ರಜೆ
ಬೆಂಗಳೂರು ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ನಾಳೆ ಡಿಸೆಂಬರ್ 27 ಸರಕಾರಿ ರಜೆ ಘೋಷಿಸಲಾಗಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.