LATEST NEWS
ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ
ಉಡುಪಿ, ಫೆಬ್ರವರಿ 14 : ಮಂದಾರ್ತಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 13 ರಿಂದ 15 ರ ವರೆಗೆ ನಡೆಯಲಿರುವ ಹಿನ್ನಲೆ ದೇವಸ್ಥಾನ ವ್ಯಾಪ್ತಿಯ ಪ್ರದೇಶಗಳಲ್ಲಿ ಮಧ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗುಂಜೆ ಮತ್ತು ಶಿರೂರು ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಫೆಬ್ರವರಿ 13 ರ ಸಂಜೆ 6 ರಿಂದ ಫೆಬ್ರವರಿ 15 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.