Connect with us

    KARNATAKA

    ಮಂಡ್ಯ – ಲಾರಿಗೆ ಕಾರು ಡಿಕ್ಕಿ ನಾಲ್ವರು ಸ್ಥಳದಲ್ಲೇ ಸಾವು…!!

    ಮಂಡ್ಯ ಜೂನ್ 04: ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


    ಮೃತರನ್ನು ಹೇಮಂತ್, ಶರತ್, ನವೀನ್ ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಜರುಗಿದೆ. ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

    ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂದೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ‌ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
    ಭಾನುವಾರ ಮುಂಜಾನೆ 5 ಗಂಟೆಯ ವೇಳೆಯಲ್ಲಿ ಈ ಅಪಘಾತ ಜರುಗಿದೆ. ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply