ಮಂಡ್ಯ, ಡಿಸೆಂಬರ್​ 07: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿದೆ. ಕಾರಿನಲ್ಲಿದ್ದ ಮೂವರು ಸಾವನಪ್ಪಿದ್ದಾರೆ.


ಮೃತರನ್ನು ಚನ್ನೇಗೌಡ(60), ಸರೋಜಮ್ಮ(55) ಮತ್ತು ಜಯಮ್ಮ(70) ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಂದ್ರೇಗೌಡ(60), ಚಂದ್ರೇಗೌಡ ಪತ್ನಿ ಸರೋಜ(55) ಹಾಗೂ ಚಿಕ್ಕಮಗಳೂರು ನಗರಸಭೆಯ ಮಾಜಿ ಅಧ್ಯಕ್ಷ ನಿಂಗೇಗೌಡ ಪತ್ನಿ ಜಯಮ್ಮ ಅವರು ಥೈಲ್ಯಾಂಡ್‌ ಟೂರ್ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ವಾಪಸಾಗಿದ್ದರು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಬಳಿಕ ಕಾರು ಪಲ್ಟಿ ಹೊಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಆದಿಚುಂಚನಗಿರಿ ಆಸ್ಪತ್ರೆಗೆ ಮೂವರ ಮೃತದೇಹ ಸ್ಥಳಾಂತರಿಸಲಾಗಿದೆ.

Share Information