KARNATAKA
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೋನಾ ಪಾಸಿಟಿವ್
ಮಂಡ್ಯ ಜುಲೈ 6: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ತಮಗೆ ಕೊರೊನಾ ಸೊಂಕು ಇರುವುದನ್ನು ಸ್ವತಃ ಅವರು ದೃಢಪಡಿಸಿದ್ದಾರೆ.
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.
ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
Facebook Comments
You may like
ಚಾಮುಂಡಿ ದೇವಿ ಪಾತ್ರಧಾರಿ ಮೈಮೇಲೆ ಬಂದ ಚಾಮುಂಡಿ …ರಾಕ್ಷಸ ಪಾತ್ರಧಾರಿ ವಧೆಗೆ ಮುಂದಾದ ಪಾತ್ರಧಾರಿ
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಕೇರಳ ಮತ್ತು ಮುಂಬೈಯಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ
ಕೇರಳ ಗಡಿ ಭಾಗದಲ್ಲಿ ಮತ್ತೆ ಕೋವಿಡ್ ತಪಾಸಣೆ , ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ಪ್ರವೇಕ್ಕೆ ಅವಕಾಶ: ಕೇರಳಿಗರಿಂದ ಪ್ರತಿಭಟನೆ
ಕೇರಳದಿಂದ ಜಿಲ್ಲೆಗೆ ಆಗಮಿಸುವವರಿಗೆ ಫೆಬ್ರವರಿ 22 ರಿಂದ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ…!!
ಕೇರಳ ವಿಧ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಕಡ್ಡಾಯ – ಜಿಲ್ಲಾಧಿಕಾರಿ
You must be logged in to post a comment Login